ʻಉಮೇಶ್ ಕತ್ತಿ ಮಂತ್ರಿಯಾಗಲು ಯೋಗ್ಯ ಅಲ್ಲʼ: ಸಿದ್ದರಾಮಯ್ಯ
ಮಂಡ್ಯ: ಮಾಸ್ಕ್ ಧರಿಸದೆ ಬೇಜಾವಾಬ್ದಾರಿ ಹೇಳಿಕೆ ನೀಡಿದ್ದ ಸಚಿವ ಉಮೇಶ್ ಕತ್ತಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ʻಉಮೇಶ್ ಕತ್ತಿ ಮಂತ್ರಿ ಆಗಲಿಕ್ಕೆ ಯೋಗ್ಯ ಅಲ್ಲʼ. ಮಾಸ್ಕ್ ಹಾಕದೆ ಅವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಮಂತ್ರಿಯಾಗಲು ಲಾಯಕ್ಕಾ ಇವರು? ಇವರ ಮೇಲೆ ಸರ್ಕಾರ ಯಾಕೆ ಕೇಸ್ ಹಾಕಿಲ್ಲ.? ಎಂದು ಪ್ರಶ್ನಿಸಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಓರ್ವ ಜನನಾಯಕ ಹೀಗೆ ಬೇಜಾವಾಬ್ದಾರಿಯುತ ಹೇಳಿಕೆ ನೀಡ್ತಾರೆ ಅಂದ್ರೆ..? ಮಾಸ್ಕ್ ಹಾಕದಿರುವವರನ್ನ ಸುಮ್ಮನೆ ಬಿಟ್ಟುಬಿಡಿ, ಕಡ್ಡಾಯ ಮಾಡಬೇಡಿ. ಇಷ್ಟ ಬಂದವರು ಹಾಕ್ತಾರೆ, ಇಷ್ಟ ಇಲ್ಲದವರು ಇರ್ತಾರೆ. ಒತ್ತಾಯ ಮಾಡಬೇಡಿ ಅಂತ ಹೇಳ್ತಾರೆ.
ಸರ್ಕಾರ ನಡೆಸಲಿಕ್ಕೆ ಇವರಿಗೆ ಯೋಗ್ಯತೆ ಇದ್ಯಾ ? ಮಂತ್ರಿಯೇ ಮಾಸ್ಕ್ ಹಾಕಲಿಲ್ಲ ಅಂದರೆ ಬೇರೆಯವರು ಏಕೆ ಹಾಕಬೇಕು? ಬೇರೆಯವರಿಗೆ ದಂಡ ಹಾಕ್ತಾರೆ, ಕೇಸ್ ದಾಖಲು ಮಾಡ್ತಾರೆ.ಮಾಸ್ಕ್ ಧರಿಸದ ಮಂತ್ರಿ ಮೇಲೆ ಕೇಸ್ ಇದುವರೆಗೂ ಯಾಕೆ ಪ್ರಕರಣ ದಾಖಲಿಸಲ್ಲ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯವರು ಯಾವಾಗಲೂ ಡಬಲ್ ಸ್ಟ್ಯಾಂಡರ್ಡ್ನವರು. ಅವರಿಗೆ ಯಾವ ಸಿಂಗಲ್ ಸ್ಟ್ಯಾಂಡರ್ಡ್ ಇದೆ.? ಅವರು ಯಾವಾಗಲೂ ಹೇಳುವುದು ಒಂದು, ಮಾಡುವುದು ಇನ್ನೊಂದು.ಇವತ್ತು ಕೊರೋನಾ ನಿಯಮಗಳ ಉಲ್ಲಂಘನೆ ಆಗಿದ್ರೆ, ಅದು ಬಿಜೆಪಿಯಿಂದ. ಬಿಜೆಪಿ ಅವರಿಂದಲೇ ಜಾಸ್ತಿ ಉಲ್ಲಂಘನೆ ಆಗಿದೆ. ಎಂದು ಆರೋಪ ಮಾಡಿದ್ದಾರೆ.