ಭಾರತ ಮೂಲದ ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷೆಯಾಗ್ತಾರಾ..?
ವಾಷಿಂಗ್ಟನ್: 2024ರಲ್ಲಿ ನಡೆಯುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕಮಲಾ ಹ್ಯಾರಿಸ್ ನನ್ನ ಉತ್ತರಾಧಿಕಾರಿ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಇಂದಿನ ಒಂದು ವರ್ಷವಾದ ಹಿನ್ನೆಲೆಯಲ್ಲಿ ಮಾತನಾಡಿರುವ ಬೈಡೆನ್, ತಮ್ಮ ಕಾರ್ಯವೈಖರಿ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು.
ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಬಗ್ಗೆ ಉತ್ತರಿಸಿದ ಬೈಡೆನ್, 2024ಕ್ಕೆ ಕಮಲಾ ಹ್ಯಾರಿಸ್ ನನ್ನ ಉತ್ತರಾಧಿಕಾರಿಯಾಗುತ್ತಾರೆ. ಆಕೆ ನಂಬರ್ 1 ಮತ್ತು ನಂಬರ್ 2 ಕೂಡಾ ಆಗಿದ್ದಾರೆ. ಕಮಲಾ ಹ್ಯಾರಿಸ್ಗೆ ಮತ ಚಲಾಯಿಸುವ ಹಕ್ಕು ಇದೆ. ಉಪಾಧ್ಯಕ್ಷೆಯಾಗಿ ಉತ್ತಮ ಕೆಲಸ ಮಾಡುತ್ತಿರುವುದರಿಂದ ಅವರು ಅಧ್ಯಕ್ಷ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದಾರೆ.
ಕಮಲಾ ಹ್ಯಾರಿಸ್ ಭಾರತದ ಮೂಲದವರು. ಏಕೆಂದರೆ ಅವರ ತಾಯಿ ಭಾರತದವರು, ತಂದೆ ಜಮೈಕಾದವರು. ಕಮಲಾ ಅವರು ಕ್ಯಾಲಿಫೋರ್ನಿಯಾದಲ್ಲಿ ಜನಿಸಿದರು. ಅಮೆರಿಕ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ಅವರು, ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಅಮೆರಿಕ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿ, ಅಧಿಕಾರಿ ನಡೆಸುತ್ತಿದ್ದಾರೆ.