ನಲಪಾಡ್ ಬೆಂಬಲಿಗರಿಂದ ಹಲ್ಲೆ; ಯುವ ಕಾಂಗ್ರೆಸ್ ಕಾರ್ಯಕರ್ತನಿಗೆ ಗಾಯ
ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ನಲಪಾಡ್ ಬೆಂಬಲಿಗರು ಯುವ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ನಿನ್ನೆ ಯುವ ಕಾಂಗ್ರೆಸ್ ಪದಾದಿಕಾರಿಗಳ ಸಭೆ ನಡೆಸಲಾಗಿದೆ. ಅನಂತರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪಾರ್ಟಿ ವೇಳೆ ಕಾರ್ಯಕರ್ತರೊಬ್ಬರಿಗೆ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ದಾಳಿಗೊಳಗಾದ ಕಾರ್ಯಕರ್ತನ ಬಾಯಿ, ತಲೆ ಸೇರಿದಂತೆ ಹಲವು ಭಾಗಗಳಲ್ಲಿ ಗಾಯಗಳಾಗಿದೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ನಿನ್ನೆ ಸಭೆ ನಡೆಸಲಾಗಿತ್ತು. ಈ ಸಭೆಯ ನಂತರ ಪಾರ್ಟಿ ಆಯೋಜಿಸಲಾಗಿದ್ದು, ಈ ವೇಳೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಹಲ್ಲೆ ನಡೆದಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹಮದ್ ನಲಪಾಡ್, ನನ್ನ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಿದೆ. ಆ ಘಟನೆಗೂ ನನಗೂ ಸಂಬಂಧವೇ ಇಲ್ಲ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಲಪಾಡ್‌ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಇಂತಹ ಸಂದರ್ಭದಲ್ಲಿ ಕಿತ್ತಾಡಿಕೊಳ್ಳುವುದು ಎಷ್ಟು ಸರಿ ಎಂದು ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.