Cinema

ಪೋಷಕರಾಗಿ ಬಡ್ತಿ ಪಡೆದ ಪ್ರಿಯಾಂಕಾ – ಜೋನಸ್‌ ದಂಪತಿ

ಮುಂಬೈ : ಬಾಲಿವುಡ್‌ ಬ್ಯೂಟಿ ಪ್ರಿಯಾಂಕಾ ಅವರು ತಾಯಿಯಾಗಿದ್ಧಾರೆ. ಪ್ರಿಯಾಂಕಾ ಚೋಪ್ರಾ ಮತ್ತು ನಿಕ್‌ ಜೋನಸ್‌ ದಂಪತಿಗಳು ತಮ್ಮ ಮೊದಲ ಮಗುವನ್ನು ಬರ ಮಾಡಿಕೊಂಡಿದ್ದಾರೆ. ಸರೋಗಸಿ ಮೂಲಕ ತಮ್ಮ ಮೊದಲ ಮಗುವನ್ನು ಪಡೆದಿರುವ ಪ್ರಿಯಾಂಕಾ ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪ್ರಿಯಾಂಕಾ ಮತ್ತು ನಿಕ್‌ ಜೋನಸ್‌ ಜೋಡಿ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಅವರು 2018ರಲ್ಲಿ ವಿವಾಹವಾಗಿದ್ದರು. ಸಾಕಷ್ಟು ಹಾಲಿವುಡ್‌ ಚಿತ್ರಗಳಲ್ಲಿ ಅಭಿನಯಿಸುತ್ತಿರುವ ಪ್ರಿಯಾಂಕ ಅವರು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ತಮಗೆ ತಾಯಿಯಾಗುವ ಬಯಕೆ ಇದೆ ಎಂದು ಹೇಳಿಕೊಂಡಿದ್ದ ಪ್ರಿಯಾಂಕಾ ಎಲ್ಲಿಯೂ ವಿಷಯ ಬಿಟ್ಟು ಕೊಡದೆ ಗೌಪ್ಯತೆ ಕಾಪಾಡಿಕೊಂಡಿದ್ದಾರೆ.

‘ಬಾಡಿಗೆ ತಾಯಿ ಮೂಲಕ ನಾವು ಮಗು ಪಡೆದಿದ್ದೇವೆ ಎಂಬುದನ್ನು ತಿಳಿಸಲು ತುಂಬ ಖುಷಿ ಆಗುತ್ತಿದೆ. ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಬೇಕಾಗಿರುವ ಈ ವಿಶೇಷ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಾಕಿದ್ದಾರೆ.

Share Post