ಜೀವ, ಜೀವನ ಎರಡೂ ಮುಖ್ಯ, ಅವರಸದ ತೀರ್ಮಾನ ಇಲ್ಲ:ಬೊಮ್ಮಾಯಿ
ಬೆಂಗಳೂರು: ಕೊರೊನಾ ತಡೆಗೆ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಬಗ್ಗೆ ಹಿಂಪಡೆದ ಬಗ್ಗೆ ಮಾತನಾಡಿದ ಸಿಎಂ, ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ.
ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು ಎನ್ನುವ ತೀರ್ಮಾನ ಕೈಗೊಂಡಿದೆ ಎಂದರು.
ದರ ಏರಿಕೆ ಅವಸರದ ತೀರ್ಮಾನ ಇಲ್ಲ
ನೀರು, ಹಾಲು ಹಾಗೂ ವಿದ್ಯುತ್ ದರ ಏರಿಕೆಯ ಕುರಿತು ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಬಗ್ಗೆ ಯಾವುದೇ ತರದ ಅವಸರದ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ಆಯಾಮಗಳಲ್ಲಿ ಈ ದರ ಏರಿಕೆ ಬಗ್ಗೆ ಪರಿಶೀಲಿಸಲಾಗುವುದು. ಈ ವಿಚಾರದಲ್ಲಿ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದರು