Bengaluru

ರಾಜ್ಯ ಸರ್ಕಾರದಿಂದ ಹಾಲು, ನೀರು, ವಿದ್ಯುತ್‌ ದರ ಏರಿಕೆಗೆ ಡಿಕೆಶಿ ಖಂಡನೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌, ಹಾಲು, ಮತ್ತು ನೀರಿನ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಸಲ್ಲಸಿರುವ ಪ್ರಸ್ತಾವನೆ ಬಗ್ಗೆ ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ ಮಾತನಾಡಿದ್ರು. ಜನಸಾಮಾನ್ಯರ ಆದಾಯ ಖಾತರಿ ಮತ್ತು ಹೆಚ್ಚಳಕ್ಕೆ ಸರ್ಕಾರ ಮೊದಲು ಕ್ರಮ ಕೈಗೊಳ್ಳಲಿ. ಅವರಿಗೆ ಆದಾಯ ಬಂದ ಮೇಲೆ ವಿದ್ಯುತ್ ದರ ಏರಿಕೆ ಮಾಡಲಿ. ಈಗ ಲಾಕ್ ಡೌನ್, ಸೀಲ್ ಡೌನ್ ನಿರ್ಬಂಧ ಹೇರಿದ್ದಾರೆ. ಸೋಂಕು ಪ್ರಮಾಣ ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿದ್ದವರು, ಸೋಂಕು ಪ್ರಮಾಣ ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ. ರಾಜಕೀಯ ಕಾರಣಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ.

ಹಾಲಿನ ದರ, ವಿದ್ಯುತ್ ದರ ಹೆಚ್ಚಿಸುತ್ತಿದ್ದಾರೆ. ರೈತನಿಗೆ ತೊಂದರೆ ಆದಾಗ ಅವನ ರಕ್ಷಣೆಗೆ ಸರ್ಕಾರ ಯಾಕೆ ನಿಲ್ಲಲಿಲ್ಲ? ಬೆಳೆ ದರ ಏಕೆ ಹೆಚ್ಚಿಸಲಿಲ್ಲ? ಬೆಂಬಲ ಬೆಲೆ ಯಾಕೆ ನೀಡಲಿಲ್ಲ?  ಏರಿಕೆಯಾಗಿರುವ ಕಬ್ಬಿಣ, ಸೀಮೆಂಟ್ ದರ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಿಲ್ಲ. ಈಗ ವಿದ್ಯುತ್ ದರ ಬಾಕಿ ಕೊಡಬೇಕು ಎನ್ನುತ್ತಿದ್ದಾರೆ. ವಿದ್ಯುತ್ ಕಂಪನಿಗಳ ಪರಿಸ್ಥಿತಿ ಹೇಗಿದೆ ಎಂದು ನಮಗೆ ಗೊತ್ತಿದೆ. ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕೆ ಹೊರತು ಅವರಿಗೆ ನೋವು ಕೊಡುವ ಕೆಲಸಕ್ಕೆ ಕೈ ಹಾಕಬಾರದು ಎಂದಿದ್ದಾರೆ.

ಈ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದೆಲ್ಲ ಊಹಾಪೋಹ ಅವಸರದ ನಿರ್ಧಾರಕ್ಕೆ ಸರ್ಕಾರ ಕೈ ಹಾಕುಬವುದಿಲ್ಲ ಎಂದು ಬೆಳಗ್ಗೆ ಬಸವರಾಜ್‌ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ರು.

Share Post