ಭದ್ರತಾ ಪಡೆಗಳ ಗುಂಡಿನ ದಾಳಿಗೆ ಉಗ್ರ ಬಲಿ, ಮತ್ತೋರ್ವ ವಶಕ್ಕೆ
ಜಮ್ಮು ಕಾಶ್ಮೀರ: ಶೋಪಿಯಾನ್ ಜಿಲ್ಲೆಯ ಕಿಲ್ಬಾಲ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ನಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ದೊರೆತಿದ್ದು, ನಂತರ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಕೂಡಲೇ ಭಯೋತ್ಪಾದಕರಿಂದ ಗುಂಡಿನ ದಾಳಿ ಪ್ರಾರಂಭವಾಗುತ್ತಿದ್ದಂತೆ ಭದ್ರತಾ ಪಡೆಗಳು ಸಹ ಪ್ರತಿದಾಳಿ ನಡೆಸಿವೆ. ಎನ್ಕೌಂಟರ್ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ.
J&K | Encounter breaks out between terrorists and security forces in Kilbal area of Shopian district, says Kashmir Zone Police
— ANI (@ANI) January 22, 2022
ಕಾರ್ಯಾಚರಣೆಗೂ ಮುನ್ನಾದಿನ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಿಂದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕನನ್ನು ಭದ್ರತಾ ಪಡೆಗಳು ಗುರುವಾರ ಬಂಧಿಸಿದ್ದು, ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕನ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಲಭಿಸಿದ್ದು, ಬೆಳಿಗ್ಗೆ ಬುದ್ಗಾಮ್ನ ಚದೂರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.