Politics

ನಮ್ಮ ಪಕ್ಷದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ; ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆಗೆ ಕೆಲ ಶಾಸಕರು ಆಗ್ರಹಿಸುತ್ತಿದ್ದಾರೆ. ಆದ್ರೆ ಇದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಬಂಧ ಕೆಲ ಶಾಸಕರು ಮಾತನಾಡುತ್ತಿದ್ದಾರೆ. ಆದ್ರೆ, ಇದನ್ನು ತೀರ್ಮಾನಿಸುವುದು ಮುಖ್ಯಮಂತ್ರಿ ಹಾಗೂ ಕೇಂದ್ರದ ವರಿಷ್ಠರು. ಹೀಗಾಗಿ ಹೈಕಮಾಂಡ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

 

Share Post