National

ಪದ್ಮ ಪ್ರಶಸ್ತಿ ಪ್ರಕಟ; ರಾಜ್ಯದ ಐವರಿಗೆ ಗೌರವ, ಬಿಪಿನ್‌ ರಾವತ್‌ ಪದ್ಮವಿಭೂಷಣ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಗೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ದೇಶದ 128 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಇದರಲ್ಲಿ ರಾಜ್ಯದ ಐವರು ಗಣ್ಯರು ಸೇರಿದ್ದಾರೆ. ಹೆಲಿಕಾಪ್ಟರ್‌ ದುರಂತದಲ್ಲಿ ಸಾವನ್ನಪ್ಪಿದ ಬಿಪಿನ್‌ ರಾವ್‌ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ನೀಡಲಾಗುತ್ತಿದೆ.

ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಕೃಷಿ ಸಂಶೋಧನೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಬ್ದುಲ್‌ ಖಾದರ್‌ ನಡಕಟ್ಟಿನ್‌ ಮತ್ತು ಅಮೈ ಮಹಾಲಿಂಗ್‌ ನಾಯ್ಕ್‌ ಅವರಿಗೆ ಪದ್ಮಶ್ರೀ ಗೌರವ ದಕ್ಕಿದೆ. ಇನ್ನು ವಿಜ್ಞಾನ ವಿಭಾಗದಲ್ಲಿ ಸುಬ್ಬಣ್ಣ ಅಯ್ಯಪ್ಪಣ್ಣ ಅವರಿಗೆ, ಕಲಾ ವಿಭಾಗದಲ್ಲಿ ಆರ್‌.ಕೇಶವಮೂರ್ತಿಯವರಿಗೆ ಪದ್ಮಶ್ರೀ ನೀಡಲಾಗಿದೆ.

ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಘೋಷಿಸಲಾಗಿದೆ.  ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು, 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.

Share Post