ರಾಜ್ಯದಲ್ಲಿಂದು 38ಸಾವಿರ ಮಂದಿಗೆ ಸೋಂಕು: ಆರೋಗ್ಯ ಇಲಾಖೆ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ 24ಗಂಟೆಯಲ್ಲಿ 38,754 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 49 ಮಂದಿ ಸಾವನ್ನಪ್ಪಿದ್ದಾರೆ. 67,236 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳು 32,083. ಪಾಸಿಟಿವಿಟಿ ದರ 20.44 ರಷ್ಟಿದೆ. ರಾಜ್ಯದಲ್ಲಿ ಒಟ್ಟು 36,92,496 ಮಂದಿಗೆ ಸೋಂಕು ತಗುಲಿದೆ, ಈವರೆಗೆ ರಾಜ್ಯದಲ್ಲಿ 33,25,001 ಜನರು ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3,28,711.
ರಾಜಧಾನಿಯಲ್ಲಿ ಇಂದು ಹೊಸದಾಗಿ 185 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ, ನಗರದಲ್ಲಿ 17,717 ಮಂದಿಗೆ ವೈರಸ್ ತಗುಲಿದೆ, 43,997 ಮಂದಿ ಚೇತರಿಸಿಕೊಂಡಿದ್ದಾರೆ. 12 ಜನ ಬೆಂಗಳೂರಿನಲ್ಲಿ ಕೊರೊನಾ ಬಲಿಯಾಗಿದ್ದಾರೆ. ನಗರದಲ್ಲಿ ಪ್ರಸ್ತುತ 1,89,853 ಸಕ್ರಿಯ ಪ್ರಕರಣಗಳಿವೆ. ಈವರೆಗೆ 16,66,475 ಮಂದಿಯಲ್ಲಿ ಕೊವಿಡ್ ಕಾಣಿಸಿಕೊಂಡಿದೆ, ಒಟ್ಟು 14,60,075 ಜನ ಚೇತರಿಸಿಕೊಂಡಿದ್ದಾರೆ. ಇಲ್ಲಿವರೆಗೂ ಒಟ್ಟು 16,546 ಜನರು ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದಿನ 27/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/QI1LM2IMTj @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/JCLNtgjLSl
— K'taka Health Dept (@DHFWKA) January 27, 2022