Bengaluru

ಮಾರ್ಚ್‌ 3ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಮಾರ್ಚ್‌ 3 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ಜಿಕೆವಿಕೆಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿವರ ಜೊತೆ ಚರ್ಚೆ ನಡೆಸಲಾಯಿತು. ಕೊವಿಡ್‌ ನಡುವೆ ಚಲನಚಿತ್ರೋತ್ಸವಕ್ಕೆ ಸಿಎಂ ಒಪ್ಪಿಗೆ ಕೊಟ್ಟಿದ್ದಾರೆ. ಭಾರತದಲ್ಲಿ ಇದು ಐದನೇ ದೊಡ್ಡ ಚಲನಚಿತ್ರೋತ್ಸವವಾಗಿದ್ದು, ಕೋವಿಡ್ ನಿಯಮಾವಳಿ ಪಾಲಿಸಿ ಚಲನಚಿತ್ರೋತ್ಸವ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಚಲನಚಿತ್ರೋತ್ಸವ ನಡೆಸುವ ಸಲುವಾಗಿ ಇಂದು 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ನಡೆಸಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

Share Post