National

ಸೌಂದರ್ಯ ಆತ್ಮಹತ್ಯೆ ಹಿನ್ನೆಲೆ; ಬಿಎಸ್‌ವೈಗೆ ಕರೆ ಮಾಡಿ ಸಾಂತ್ವನ ಹೇಳಿದ ಮೋದಿ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಘಟನೆ ಬಗ್ಗೆ ವಿವರ ಪಡೆದಿರುವ ಮೋದಿಯವರು ಯಡಿಯೂರಪ್ಪ ಅವರಿಗೆ ಸಾಂತ್ವನ ಹೇಳಿದ್ದಾರೆ.

ಇಂದು ಬೆಳಗ್ಗೆ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಷಯ ತಿಳಿದ ಪ್ರಧಾನಿ ಮೋದಿ, ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ. ನಿಮ್ಮ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ  ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮೊಮ್ಮಗಳ ನಿಧನಕ್ಕೆ ಸಾಂತ್ವನ ಹೇಳಿದ್ದಾರೆ.  ಇನ್ನು ರಾಜ್ಯಪಾಲ ಥಾವರ್‌ ಚಂದ್‌ ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

 

 

Share Post