BengaluruHealth

24ಗಂಟೆಯಲ್ಲಿ 33ಸಾವಿರ ಕೊರೊನಾ ಕೇಸ್‌ ದೃಢ: ಸೋಂಕಿಗೆ 70ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿಂದು  33,337 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 70 ಮಂದಿ ಸಾವನ್ನಪ್ಪಿದ್ದಾರೆ.ಇದುವರೆಗೂ 69,902 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 2,52,132 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೆ 37,57,031 ಮಂದಿಗೆ ಸೋಂಕು ತಗುಲಿದೆ.  38,874 ಸೋಂಕಿತರು ಮೃತಪಟ್ಟಿದ್ದಾರೆ. 34,65,995 ಸೋಂಕಿತರು ಗುಣಮುಖರಾಗಿದ್ದಾರೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಪ್ರಕರಣಗಳ ಸಂಖ್ಯೆ ಶುಕ್ರವಾರಕ್ಕಿಂತ ಇಂದು (ಶನಿವಾರ) ತುಸು ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ 16,586 ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಮೃತಪಟ್ಟಿದ್ದಾರೆ. ಈ ಮಧ್ಯೆ, ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ರಾಜ್ಯದಲ್ಲಿ ಜನವರಿ 28ಕ್ಕೆ ಶೇ 1.90ರಷ್ಟಿತ್ತು. 2.88 ಲಕ್ಷ ಕೋವಿಡ್ ಪ್ರಕರಣಗಳ ಪೈಕಿ 5,477 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

 

 

 

 

Share Post