Bengaluru

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಉಪನಾಯಕರಾಗಿ ಯು.ಟಿ.ಖಾದರ್

ಬೆಂಗಳೂರು: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.​‌

ಮಂಗಳೂರು ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಯು.ಟಿ ಖಾದರ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರು. ಅಲ್ಪಸಂಖ್ಯಾತರ ನಾಯಕರಾಗಿರುವ ಯು.ಟಿ.ಖಾದರ್‌, ಈ ಹಿಂದೆ ಆರೋಗ್ಯ, ವಸತಿ, ಆಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಹಲವು ಬದಲಾವಣೆಗಳು, ನೇಮಕಗಳು ಆಗುತ್ತಿವೆ. ಅದರ ಭಾಗವಾಗಿ ಯು.ಟಿ.ಖಾದರ್‌ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿದ್ದಾರೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ.

 

Share Post