National

ಆರ್ಥಿಕ ಅಭಿವೃದ್ಧಿ ಕಡೆ ಹೆಚ್ಚಿನ ಗಮನ; ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಇಂದಿನಿಂದ ಕೇಂದ್ರ ಬಜೆಟ್‌ ಅಧಿವೇಶನ ಶುರುವಾಗುತ್ತಿದೆ. ಇಂದು ರಾಷ್ಟ್ರಪತಿ ಜಂಟಿ ಸದನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಾಳೆ ಬಜೆಟ್‌ ಮಂಡನೆಯಾಗುತ್ತದೆ. ಅಧಿವೇಶನದ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸಂಸತ್‌ ಭವನದ ಬಳಿ ಮಾತನಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಾಕಷ್ಟು ಅವಕಾಶಗಳಿವೆ. ದೇಶದ ಆರ್ಥಿಕ ಅಭಿವೃದ್ಧಿಯ ಬಗ್ಗೆ ಬಜೆಟ್‌ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್‌ ಕಲಾಪದಲ್ಲಿ ಆರೋಗ್ಯ ವಿಚಾರದ ಬಗ್ಗೆ ಹೆಚ್ಚು ಚರ್ಚೆಯಾಗಲಿದೆ. ಎಲ್ಲಾ ಸಂಸದರೂ ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಲಾಗುತ್ತದೆ. ಎಲ್ಲರೂ ಮುಕ್ತ ಮನಸ್ಸಿನಿಂದ ಚರ್ಚಿಸುವ ವಿಶ್ವಾವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 

Share Post