ಕೂಡಲೇ ಟೋಯಿಂಗ್ ನಿಲ್ಲಿಸಿ; ರವಿಕಾಂತೇಗೌಡ ಸೂಚನೆ
ಬೆಂಗಳೂರು; ವಾಹನಗಳನ್ನು ಟೋಯಿಂಗ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ವಾಹನಗಳ ಟೋಯಿಂಗ್ ನಿಲ್ಲಿಸುವಂತೆ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವವರೆಗೂ ಟೋಯಿಂಗ್ ನಿಲ್ಲಿಸುವಂತೆ ರವಿಕಾಂತೇಗೌಡ ಸೂಚನೆ ನೀಡಿದ್ದಾರೆ.
ಈ ಹಿಂದೆ ಪೊಲೀಸ್ ಇಲಾಖೆಯೇ ಟೋಯಿಂಗ್ ವ್ಯವಸ್ಥೆಯನ್ನು ನಿರ್ವಹಿಸುತ್ತಿತ್ತು. ಈಗ ಖಾಸಗಿಯವರಿಗೆ ಗುತ್ತಿಗೆ ನೀಡಲಾಗಿದೆ. ಖಾಸಗಿಯವರು ಬೇಕಾಬಿಟ್ಟಯಾಗಿ ವಾಹನಗಳನ್ನು ಟೋಯಿ೯ಂಗ್ ಮಾಡುತ್ತಿದ್ದಾರೆ. ಹೀಗಾಗಿ, ಟೋಯಿಂಗ್ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಿರಿಕಿರಿ ತಪ್ಪಿಸಲು ಟೋಯಿಂಗ್ ವ್ಯವಸ್ಥೆ ಹೊಸ ರೂಪ ನೀಡಲು ತೀರ್ಮಾನಿಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಈ ಬೆನ್ನಲ್ಲೇ, ರವಿಕಾಂತೇಗೌಡ ತಾತ್ಕಾಲಿಕವಾಗಿ ಟೋಯಿಂಗ್ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.