Bengaluru

ಬೀದಿ ಬದಿ ವ್ಯಾಪಾರಿಗಳಿಗೆ FSSAI ಟ್ರೈನಿಂಗ್‌

ಬೆಂಗಳೂರು; ಬೃಹತ್ ಬೆಂಗಳೂರು ಮಾಹನಗರ ಪಾಲಿಕೆ ಪಶ್ಚಿಮ ವಲಯದ ಗಾಂಧಿನಗರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಬಡಾವಣೆ, ಗೋವಿಂದರಾಜನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳಿಗೆ ತರಬೇತಿ ನೀಡಲು ತೀರ್ಮಾನಿಸಲಾಗಿದೆ.

ವ್ಯಾಪಾರಿಗಳು ತಯಾರಿಸಿ ಮಾರಾಟ ಮಾಡುವ ಆಹಾರ ಪದಾರ್ಥಗಳು ಸುರಕ್ಷತೆಯಿಂದ, ಸ್ವಚ್ಛತೆಯಿಂದ ಮತ್ತು ಗುಣಮಟ್ಟದಿಂದ ಕೂಡಿರಬೇಕು. ಈ ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಸಂಸ್ಥೆಯ ವತಿಯಿಂದ ಆಹಾರ ಸುರಕ್ಷತೆ, ಸ್ವಚ್ಛತೆ ಮತ್ತು ಗುಣಮಟ್ಟ ಇತ್ಯಾದಿ ವಿಷಯಗಳ ಬಗ್ಗೆ(FSSAI Training) ತರಬೇತಿ ನೀಡಿ ಪ್ರಮಾಣಪತ್ರ ನೀಡಲಾಗುತ್ತದೆ.

ಹೀಗಾಗಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಎಲ್ಲಾ ಬೀದಿಬದಿ ವ್ಯಾಪಾರಿಗಳು ತರಬೇತಿ ಮತ್ತು ಪ್ರಮಾಣಪತ್ರ ಪಡೆಯಲು ತಮ್ಮ ವಿವರಗಳೊಂದಿಗೆ ಪಾಲಿಕೆ ಪಶ್ಚಿಮ ವಲಯದ ಕಲ್ಯಾಣಾಧಿಕಾರಿಗಳ ಕಛೇರಿ, (ಕಲ್ಯಾಣ ಶಾಖೆ) ಸಂಪಿಗೆ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು-20. ಇಲ್ಲಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಿನಾಂಕ: 19.02.2022 ರೊಳಗೆ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ನಂತರದ ದಿನಗಳಲ್ಲಿ(FSSAI) ಪ್ರಮಾಣ ಪತ್ರವಿಲ್ಲದೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲವೆಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share Post