ಸಂಪುಟ ಸಭೆ ಮುಕ್ತಾಯ; ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ
ನವದೆಹಲಿ: ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆಗೆ ಸಂಪುಟದಲ್ಲಿ ಒಪ್ಪಿಗೆ ಪಡೆದುಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸಂಸತ್ ಕಲಾಪ ಶುರುವಾಗಲಿದ್ದು, ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಶುರುವಾಗಲಿದ್ದು, ಮೂರು ಗಂಟೆಗೂ ಹೆಚ್ಚು ಕಾಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಎಲ್ಲಾ ಸದಸ್ಯರು ಸದನಕ್ಕೆ ಆಗಮಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಾ ಬಜೆಟ್ ಪ್ರತಿಯೊಂದಿಗೆ ಕಲಾಪಕ್ಕೆ ಹಾಜರಾಗಿದ್ದಾರೆ.