ಇದು ಹೊಸ ಚೈತನ್ಯ ತುಂಬುವ ಬಜೆಟ್ : ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: 2022-23 ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ವಿತ್ತಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಮಂಡಿಸಿದ ಬಜೆಟ್ ದೇಶದ ಅರ್ಥವ್ಯವಸ್ಥೆಗೆ ಹೊಸ ಚೈತನ್ಯ ತುಂಬುವ ಜೊತೆಗೆ ಪ್ರಗತಿಗೆ ವೇಗವರ್ಧಕವಾಗಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ಹಿಮ್ಮೆಟ್ಟಿಸಿ, ಸ್ವಾವಲಂಬಿ ರಾಷ್ಟ್ರನಿರ್ಮಾಣಕ್ಕೆ ಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರದ ಸಬ್ ಕಾ ವಿಕಾಸ್ ಬದ್ಧತೆಗೆ ನಿದರ್ಶನವಾಗಿದೆ.
ವಿಶೇಷವಾಗಿ ಕಾವೇರಿ ಸೇರಿದಂತೆ ನದಿಗಳ ಜೋಡಣೆ, ಉದ್ಯೋಗ ಸೃಷ್ಟಿ, 3.8 ಕೋಟಿ ಕುಟುಂಬಗಳಿಗೆ ನಲ್ಲಿನೀರು ಸಂಪರ್ಕ ಕಲ್ಪಿಸಲು 60,000 ಕೋಟಿ ರೂ, ಕೃಷಿ, ಪಿಎಂ ಗತಿಶಕ್ತಿ, ಆರೋಗ್ಯ ಸೇವೆ, ಹೂಡಿಕೆ ಉತ್ತೇಜನ ವಲಯಗಳಿಗೆ ಆದ್ಯತೆ ನೀಡಿರುವುದು ರಾಜ್ಯದ ಬೆಳವಣಿಗೆಗೆ ಗಣನೀಯ ನೆರವು ನೀಡಲಿದೆ.