BengaluruHealth

ಇಂದು 20ಸಾವಿರ ಮಂದಿಗೆ ಕೊರೊನಾ: 81 ಸಾವು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿಂದು  20,505 ಕೋವಿಡ್ ಪ್ರಕರಣಗಳು ದಾಖಲಾಗಿವೆ೩. ಸೋಂಕಿಗೆ 81 ಮಂದಿ ಬಲಿಯಾಗಿದ್ದಾರೆ.  ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1,77,244ಕ್ಕೆ ಏರಿದ್ದು, ಕೋವಿಡ್ ಪಾಸಿಟಿವಿಟಿ ದರ ಶೇಕಡ 12.55 ರಷ್ಟಿದೆ. ಇಂದು 40,903 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್‌ ಆಗಿದ್ದಾರೆ.

ಇಲ್ಲಿವರೆಗೂ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 38,44,338ಕ್ಕೆ ಏರಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 39,137ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 8,850 ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್‌ ಮಾಹಿತಿ ನೀಡಿದ್ದಾರೆ.

 

Share Post