ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಅಂತಿಮ ವರದಿ ಸಲ್ಲಿಕೆಗೆ ಅನುಮತಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಸಿಡಿ ಪ್ರಕರಣದ ಅಂತಿಮ ವರದಿ ಸಲ್ಲಿಸಲು ತಡೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಮಧ್ಯಂತರ ಆದೇಶ ತೆರವಿಗೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ವಾದ ಮನ್ನಿಸಿದ ಕೋರ್ಟ್, ಅಂತಿಮ ವರದಿ ಸಲ್ಲಿಕೆಗೆ ಅನುಮತಿ ನೀಡಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆಯೇ ಕಾನೂನು ಬಾಹಿರ, ಹೀಗಾಗಿ ಅದರ ಅಂತಿಮ ತನಿಖಾ ವರದಿ ಸ್ವೀಕರಿಸಬಾರದೆಂದು ಕೋರ್ಟ್‌ಗೆ ಮನವಿ ಮಾಡಿದ್ದರು. ಆದ್ರೆ, ಹೈಕೋರ್ಟ್ ಎಸ್‌ಐಟಿ ಮನವಿಯನ್ನು ಪುರಸ್ಕರಿಸಿದೆ. ಜೊತೆಗೆ ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ಹೇಳಿದೆ.