ಕೊರೊನಾ ವರದಿ: ರಾಜ್ಯದಲ್ಲಿಂದು 16,436 ಮಂದಿಗೆ ಸೋಂಕು, 60ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಇಂದು 16,436 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 60 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ 1,48,800 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇಂದಿನ ಪಾಸಿಟಿವಿಟಿ ದರ ಶೇ 11.31 ರಷ್ಟಿದೆ, ಸಾವನ್ನಪ್ಪಿದ ಸರಾಸರಿ ಶೇ 0.36 . ಒಟ್ಟು 44,819 ಜನರು ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ 38,60,774 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಈವರೆಗೆ ಒಟ್ಟು 39,197 ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಇಂದು 6,640 ಮಂದಿಗೆ ಸೋಂಕು ತಗುಲಿದೆ, ನಗರದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ 71,525 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 17,43,065 ಜನರಲ್ಲಿ ಸೋಂಕು ದೃಢಪಟ್ಟಿದ್ದು, 16,54,910 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 16,629 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Today's Media Bulletin 03/02/2022
Please click on the link below to view bulletin.https://t.co/e3XdCwjJQQ @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/BNrFRPtoXa— K'taka Health Dept (@DHFWKA) February 3, 2022