National

ಗುಂಡಿನ ದಾಳಿ ಹಿನ್ನೆಲೆ: ಸಂಸದ ಅಸಾದುದ್ದೀನ್‌ ಓವೈಸಿಗೆ Z ಕ್ಯಾಟಗರಿ ಭದ್ರತೆ

ದೆಹಲಿ: ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಎಂಐಎಂ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಮೇಲೆ ಬಂದೂಕುಧಾರಿಗಳಿಂದ ಗುಂಡಿನ ದಾಳಿ ನಡೆಸಲಾಗಿತ್ತು. ಈ ಘಟನೆ ಬಳಿಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಂಸದ ಓವೈಸಿಗೆ Z ಕೆಟಗರಿ ಭದ್ರತೆ ಒದಗಿಸಲಾಗಿದೆ.

ಗುಂಡಿನ ದಾಳಿಯ ನಂತರ ಕೇಂದ್ರ ಗೃಹ ಸಚಿವಾಲಯವು ಸಂಸದ ಒವೈಸಿ ಅವರ ಭದ್ರತೆಯ ಕುರಿತು ಪರಿಶೀಲನೆ ನಡೆಸಿತು. ಪರಿಶೀಲನೆಯ ಬಳಿಕ ಸಂಸದ ಅಸಾದುದ್ದೀನ್ ಓವೈಸಿಗೆ ಸಿಆರ್‌ಎಫ್‌ಎಫ್‌ನೊಂದಿಗೆ Z ಕೆಟಗರಿ ಭದ್ರತೆ ನೀಡಲು ನಿರ್ಧರಿಸಲಾಯಿತು. ಭದ್ರತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.ಈ ನಡುವೆ ಓವೈಸಿ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರನ್ನು ಯುಪಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಓವೈಸಿಗೆ ಪ್ರಸ್ತುತ ನಾಲ್ಕರಿಂದ ಆರು NSG ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 22 ಸಿಬ್ಬಂದಿಗಳ Z-ಪ್ಲಸ್ ಸೆಕ್ಯುರಿಟಿಯನ್ನು ನೀಡಲಾಗಿದೆ.  ಬೆಂಗಾವಲು ವಾಹನದೊಂದಿಗೆ ದೆಹಲಿ ಪೊಲೀಸ್ ಅಥವಾ ITBP ಅಥವಾ CRPF ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

Share Post