Cinema

ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಇನ್ನಿಲ್ಲ

ಮುಂಬೈ: ಹಲವು ದಿನಗಳಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾನಕೋಗಿಲೆ  ಲತಾ ಮಂಗೇಶ್ಕರ್ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕೊರೊನಾ ಬಂದಿದ್ದರಿಂದಾಗಿ ಜನವರಿ 8 ರಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಲತಾ ಮಂಗೇಶ್ಕರ್‌ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಆದ್ರೆ ನಿನ್ನೆಯಿಂದ ಮತ್ತೆ ಅವರ ಆರೋಗ್ಯ ಏರುಪೇರಾಗಿತ್ತು. ಇಂದು ಬೆಳಗ್ಗೆ ಲತಾ ಮಂಗೇಶ್ಕರ್‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

92 ವರ್ಷದ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದರು. ತಜ್ಞ ವೈದ್ಯರು ಹೆಚ್ಚಿ ಮುತುವರ್ಜಿ ವಹಿಸಿ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರಾದ ಲತಾ ಮಂಗೇಶ್ಕರ್ ಅವರು 1942ರಲ್ಲಿ ತಮ್ಮ 13 ನೇ ವಯಸ್ಸಿನಲ್ಲಿ ವೃತ್ತಿಜೀವನ ಪ್ರಾರಂಭಿಸಿದರು. ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಭಾರತದ ನೈಟಿಂಗೇಲ್ ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರು ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಮುಡಿಗೇರಿಸಿಕೊಂಡಿದ್ದಾರೆ

Share Post