National

ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡದಂತೆ ಸಿಎಂ ಮನವಿ

ದೆಹಲಿ: ರಾಜ್ಯದಲ್ಲಿ ಕಾವೇರಿದ ಹಿಜಾಬ್‌ ವಿವಾದ ಕುರಿತಂತೆ ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ಮಾತನಾಡಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡಬಾರದು, ನ್ಯಾಯಾಲಯದಿಂದ ತೀರ್ಪು ಬರುವವರೆಗೂ ಕಾಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸರ್ಕಾ‌ರದ ಸುತ್ತೋಲೆಯನ್ನು ಎಲ್ಲಾ ವಿದ್ಯಾರ್ಥಿಗಳು ಪಾಲನೆ ಮಾಡಬೇಕು. ಶಾಂತಿ ಕದಡುವ ಕೆಲಸವನ್ನು ಮಾಡಬಾರದು. ನಾಳೆ ನ್ಯಾಯಾಲಯದಿಂದ ತೀರ್ಪು ಬರಲಿದೆ, ತೀರ್ಪು ಬಂದ ಬಳಿಕ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಅಲ್ಲಿವರೆಗೂ ಸರ್ಕಾರದ ಆದೇಶವನ್ನು ಪಾಲನೆ ಮಾಡಿ. ಹಿಜಾಬ್‌ ಹಿಂದೆ ಕೆಲ ಶಕ್ತಿಗಳು ಕೆಲಸ ಮಾಡುತ್ತಿವೆ. ಕೇರಳ, ಮಹಾರಾಷ್ಟ್ರದಲ್ಲೂ ಈ ಹಿಂದೆ ವಿವಾದ ನಡೆದಿತ್ತು ಈ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ತಿಳಿಸಿದ್ರು.

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಅಂತರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಯಲಿದೆ ಹಾಗಾಗಿ ಇಂದು ಸಿಎಂ ಬಸವರಾಜ್‌  ಬೊಮ್ಮಾಯಿವರು ದೆಹಲಿಗೆ ತಲುಪಿದ್ದಾರೆ . ಎರಡು ದಿನಗಳ ಕಾಲ ಸಿಎಂ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Share Post