National

ಸಿಬಿಐ ತನಿಖೆಗೆ ವಿರೋಧ; ವಿನಯ್‌ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಕಾಂಗ್ರೆಸ್‌ನ ಮಾಜಿ ಶಾಸಕ ವಿನಯ್‌ ಕುಲಕರ್ಣಿಗೆ  ಕಾನೂನು ಹೋರಾಟದಲ್ಲಿ ಹಿನ್ನೆಡೆಯಾಗಿದೆ. ಜಿಲ್ಲಾ ಪಂಚಾಯತ್‌ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣದ ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಕೆಲವು ವರ್ಷಗಳ ಹಿಂದೆ ಧಾರವಾಡದಲ್ಲಿ ಯೋಗೀಶ್‌ ಗೌಡ ಕೊಲೆಯಾಗಿತ್ತು. ಜಿಮ್‌ನಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್‌ ಕುಲಕರ್ಣಿ ಕೂಡಾ ಆರೋಪಿಯಾಗಿದ್ದಾರೆ. ಈ ಪ್ರಕರಣವನ್ನು 2019ರಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಗಳು ವಿನಯ್‌ ಕುಲಕರ್ಣಿಯವರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರು.

ಆದರೆ ವಿನಯ್‌ ಕುಲಕರ್ಣಿ, ಪ್ರಕರಣದಲ್ಲಿ ನನ್ನನ್ನು ವಿನಾ ಕಾರಣ ಸಿಲುಕಿಸಲಾಗಿದೆ. ಸಿಬಿಐ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ಸರ್ಕಾರ ಆದೇಶವನ್ನು ರದ್ದು ಮಾಡಬೇಕೆಂದು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದ್ರೆ ಹೈಕೋರ್ಟ್‌ ರಾಜ್ಯ ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದ್ರೆ ಅಲ್ಲೂ ಕೂಡಾ ವಿನಯ್‌ ಕುಲಕರ್ಣಿಗೆ ಹಿನ್ನಡೆಯಾಗಿದೆ. ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

Share Post