ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಸಿಎಂ ಬೊಮ್ಮಾಯಿ ಮನವಿ
ದೆಹಲಿ: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ಕುರಿತಂತೆ ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಚೋದನಕಾರಿ ಹೇಳಿಕೆ ನೀಡಬೇಡಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಕ್ತ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಶಾಂತಿ ಭಂಗ ತರಲು ಬಿಡುವುದಿಲ್ಲ ಎಂದು ಬೊಮ್ಮಾಯಿಯವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಶಾಂತ ರೀತಿಯಿಂದ ವರ್ತಿಸಬೇಕು. ಹಿಜಾಬ್ ಸಂಬಂಧ ವಿವಾದ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಕೋರ್ಟ್‌ನಲ್ಲಿ ಈ ಬಗ್ಗೆ ಪರಿಹಾರ ಸಿಗುವ ವಿಶ್ವಾಸವಿದೆ. ನ್ಯಾಯಾಲಯದಿಂದ ತೀರ್ಪು ಬರುವವರೆಗೂ ಶಾಂತಿ ಕಾಪಾಡಬೇಕು. ಇದೊಂದು ಸೂಕ್ಷ್ಮವಾದ ವಿಚಾರ ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣೀಸಿದೆ. ತೀರ್ಪು ಬರುವವರೆಗೂ ಏನನ್ನು ಹೇಳಲಾಗುವುದಿಲ್ಲ.
ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಸಭೆಯಲ್ಲಿ ಶಿಕ್ಷಣ ಸಚಿವರು, ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇನೆ. ಕೋರ್ಟ್‌ನ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಬಂದ ಕೂಡಲೇ ಮುಂದಿನ ತೀರ್ಮಾನ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.