Bengaluru

ಹಿಜಾಬ್‌ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ : 3ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಹಿಜಾಬ್‌ ವಸ್ತ್ರದ ವಿರುದ್ಧವಾಗಿ ಗಲಾಟೆಗಳು ನಡೆಯುತ್ತಿವೆ. ಇದರ ಸಂಬಂಧ  ಹಿಜಾಬ್ ಅರ್ಜಿ ವಿಚಾರಣೆ ಇಂದು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಈಗ ಅದರ ಮುಮಧುವರಿದ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಹೈಕೋರ್ಟ್‌ ಏಕಸದಸ್ಯ ಪೀಠದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಮತ್ತೆ ಅರ್ಜಿ ವಿಚಾರಣೆ ಶುರುವಾಗಲಿದೆ.  ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ವಾದ ಮಂಡಿಸಲಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ನಾಳೆಯಿಂದ ಮೂರು ದಿನಗಳ ಕಾಲ ರಜೆಯನ್ನು ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಣೆ ಮಾಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.  ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ಯಾರೂ ಯಾವುದೇ ರೀತಿಯ ಗಲಭೆ ಸೃಷ್ಟಿ ಮಾಡದಂತೆ ಮನವಿ ಮಾಡಿದ್ದಾರೆ.

Share Post