International

ಕೊಲಂಬಿಯಾದಲ್ಲಿ ಗುಡ್ಡ ಕುಸಿದು 14 ಮಂದಿ ದುರ್ಮರಣ

ಕೊಲಂಬಿಯಾ: (Colombia Mudslide) ಪಶ್ಚಿಮ ಕೊಲಂಬಿಯಾದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು,  14 ಜನರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ 35 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿ ಕೆಸರಿನಲ್ಲಿ ಜನ ಸಿಲುಕಿಕೊಂಡಿದ್ರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದಿದ್ದಾರೆ.

ಪಶ್ಚಿಮ ಕೊಲಂಬಿಯಾದಲ್ಲಿ ಭಾರೀ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ಪೆರೆರಿ(perari) ಪ್ರದೇಶದಲ್ಲಿ ಭೂಕುಸಿತದಿಂದಾಗಿ ಅಲ್ಲಿನ ವಸತಿ ಪ್ರದೇಶಗಳು ಪೂರ್ತಿ ಕೆಸರುಮಯವಾಗಿವೆ. ಕೆಸರಿನಲ್ಲಿ ಹಲವರುಸಾವನ್ನಪ್ಪಿರುವುದಲ್ಲದೆ ಕೆಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುಬ 35 ಮಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಮತ್ತೆ ಮತ್ತೆ ಭೂಕುಸಿಯುವ ಸೂಚನೆ ಎದ್ದು ಕಾಣುತ್ತಿದೆ ಎಂಬ ಆತಂಕವನ್ನು ಅಲ್ಲಿನ ಅಧಿಕಾರಿಗಳು ಹೊರಹಾಕಿದ್ದಾರೆ.  ಪ್ರಾಣಹಾನಿ ಸಂಭವಿಸುವ ಮುನ್ನ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ  ಸ್ಥಳೀಯರಿಗೆ ಸೂಚನೆ ನೀಡಲಾಗಿದೆ.

ಕೊಲಂಬಿಯಾದ ಅಧ್ಯಕ್ಷ ಇವಾನ್ ಡ್ಯೂಕ್(ivan duke) ಮೃತರಿಗೆ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯ ಹಾಗೂ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರವನ್ನು ಕ್ರಮಗಳನ್ನು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಕೊಲಂಬಿಯಾದ ವಿಪತ್ತು ನಿರ್ವಹಣಾ ರಕ್ಷಣಾ ತಂಡಗಳು ಮಣ್ಣಿನಲ್ಲಿ ಕಾಣೆಯಾದವರಿಗಾಗಿ ಹುಡುಕಾಟ ನಡೆಸುತ್ತಿವೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕಾಯಾಗುವ ಆತಂಕ ವ್ಯಕ್ತಪಡಿಸಿದ್ದಾರೆ.

Share Post