Crime

PETROL BOMB: ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆತ

ಚೆನ್ನೈ: ತಮಿಳುನಾಡಿನಲ್ಲಿ ದುಷ್ಕರ್ಮಿಯೊಬ್ಬ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದು ಸ್ಫೋಟಿಸಿದ್ದಾನೆ. ರಾತ್ರಿ ವೇಳೆ ಈ ಕೃತ್ಯ ಎಸಗಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಚೆನ್ನೈನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಬುಧವಾರ ರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಈ ಕೃತ್ಯ ಎಸಗಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸಣ್ಣಪುಟ್ಟ ಹಾನಿಯಾಗಿದೆ. ಆದ್ರೆ ಯಾರಿಗೂ ಏನೂ ಆಗಿಲ್ಲ. ಈ ಸಂಬಂಧ ವಿನೋದ್‌ ಎಂಬಾತನನ್ನು ವಿಚಾರಣೆ ನಡೆಸಲಾಗುತ್ತಿದೆ. ಆದ್ರೆ ಘಟನೆಗೆ ಕಾರಣ ಏನು ಅನ್ನೋದು ಮಾತ್ರ ಇನ್ನೂ ಗೊತ್ತಾಗಿಲ್ಲ.

Share Post