ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ; 25 ಲಕ್ಷ ರೂ. ವಿದೇಶಿ ಕರೆನ್ಸಿ ವಶ
ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ವಿದೇಶಿ ಕರೆನ್ಸಿಯನ್ನು ಸಾಗಿಸಲು ಯತ್ನಿಸುತ್ತಿದ್ದ ಆರೋಪಿಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 25.17 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ವ್ಯಕ್ತಿಯೊಬ್ಬ ಏರ್ ಇಂಡಿಯಾ ವಿಮಾನದಲ್ಲಿ ಸೀಟ್ ಬುಕ್ ಮಾಡಿದ್ದರು. ಆತನ ತಪಾಸಣೆ ನಡೆಸಿದಾಗ ಆತನ ಬಳಿ 90 ಸಾವಿರ ಧೀರಮ್ ನೋಟುಗಳು ಇದ್ದವು. ಅವುಗಳ ಬೆಲೆ 17 ಲಕ್ಷ 77 ಸಾವಿರ ರೂಪಾಯಿ ಇರಬಹುದೆಂದು ಅಂದಾಜಿಸಲಾಗಿದೆ. ಇನ್ನೊಂದೆಡೆ ಇನ್ನೊಬ್ಬನ ಬಳಿಯಿಂದ 10 ಸಾವಿರ ಅಮೆರಿಕನ್ ಡಾಲರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.