Bengaluru

ಬಿಜೆಪಿಯವರು ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಆಟ ಆಡ್ತಿದಾರೆ-ಸಿದ್ದರಾಮಯ್ಯ

ಬೆಂಗಳೂರು: ಹಿಜಾಬ್‌ ವಿವಾದ ಕುರಿತಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ತೀವ್ರ ಟೀಕೆ ಮಾಡುತ್ತಿದ್ದಾರೆ. ಪರಸ್ಪರ ವಾದ ಪ್ರತಿವಾದ ಮಾಡುತ್ತಾ ಒಬ್ಬರ ಮೇಲೆ ಒಬ್ಬರು ಆರೋಪಗಳ ಸುರಿಮಳೆ ಹರಿಸುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಮತ್ತೊಮ್ಮೆ ಬಿಜೆಪಿ ನಾಯಕರ ಮೇಲೆ ಕಿಡಿಕಾರಿದ್ದು ಜನರ ಭಾವನಾತ್ಮಕ ವಿಚಾರದಲ್ಲಿ ಆಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್‌ ವಿಚಾರ ಮುಂದಿಟ್ಟುಕೊಂಡು ಬಿಜೆಪಿಯವರು ಜನರ ಭಾವನೆಗೆ ಪೆಟ್ಟು ಮಾಡಲು ಕಾಯುತ್ತಿದ್ದಾರೆ. ಧರ್ಮ, ಜಾತಿ ನಶೆಯನ್ನು ಜನರಿಗೆ ಅಂಟಿಸಿದ್ದಾರೆ. ದೇಶದ ಜನರ ದಾರಿ ತಪಪಿಸುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಜೊತೆಗೆ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ದೇಶವನ್ನು ಲೂಟಿ ಹೊಡೆಯುವ ಕೆಲಸ ಮಾಡ್ತಿದ್ದಾರೆ. ಇದನ್ನೆಲ್ಲ ಮುಚ್ಚಲು ಭಾವನಾತ್ಮಕ ವಿಚಾರವನ್ನು ಜನರ ಮುಂದಿಡುತ್ತಿದ್ದಾರೆ. ಕೇಸರಿ ಶಾಲನ್ನು ಮಕ್ಕಳು ಖರೀಧಿಸಿ ಹಾಕಿದ್ದಲ್ಲ. ಸಂಘಪರಿವಾದವರೇ ನೀಡಿದ್ದು. ಸಮವಸ್ತ್ರದ ಹೆಸರಲ್ಲಿ ಮಕ್ಕಳಲ್ಲಿ ದ್ವೇಷದ ಭಾವನೆ ಬಿತ್ತುತ್ತಿದ್ದಾರೆ. ಹಿಜಾಬ್‌ ಒಂದು ವಿಚಾರವೇ ಅಲ್ಲ. ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೀಗೆ ಮಾಡ್ತಿದ್ದಾರೆ. ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Share Post