Bengaluru

ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ನಲಪಾಡ್‌ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಹಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಎನ್‌.ಎ.ಹ್ಯಾರಿಸ್‌ ಪುತ್ರ ಮಹಮದ್‌ ನಲಪಾಡ್‌ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಲಪಾಡ್‌ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು, ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌, ಯುವ ಕಾಂಗ್ರೆಸ್‌ ಬಾವುಟ ನೀಡಿ ನಲಪಾಡ್‌ಗೆ ಶುಭ ಕೋರಿದರು.

ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕಾಗಿ ವರ್ಷದ ಹಿಂದೆ ಚುನಾವಣೆ ನಡೆದಾಗ ನಲಪಾಡ್‌ ಅತಿ ಹೆಚ್ಚು ಮತಗಳನ್ನು ಪಡೆದಿದ್ದರು. ಆದ್ರೆ, ಹಲವು ಕಾರಣಗಳಿಗಾಗಿ ಎರಡನೇ ಸ್ಥಾನದಲ್ಲಿದ್ದ ರಕ್ಷಾ ರಾಮಯ್ಯ ಅವರಿಗೆ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು. ಅನಂತರ ಸಂಧಾನ ಮಾಡತುಕತೆ ನಡೆದು, ಜನವರಿಯಲ್ಲಿ ನಲಪಾಡ್‌ ಅವರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂದು ರಕ್ಷಾ ರಾಮಯ್ಯ ಅವರಿಗೆ ಸೂಚಿಸಲಾಗಿತ್ತು. ಪಕ್ಷದ ಸೂಚನೆಯಂತೆ ರಕ್ಷಾ ರಾಮಯ್ಯ ತಮ್ಮ ಅಧಿಕಾರವನ್ನು ನಲಪಾಡ್‌ಗೆ ಬಿಟ್ಟುಕೊಟ್ಟಿದ್ದಾರೆ.

ಕೆಪಿಸಿಸಿಯ ನೂತನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಲಪಾಡ್‌ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಕಾಂಗ್ರೆಸ್‌ನ ಹಲವು ನಾಯಕರು ಹಾಜರಿದ್ದು ನಲಪಾಡ್‌ಗೆ ಶುಭ ಕೋರಿದ್ದಾರೆ.

 

 

Share Post