ಬಿಜೆಪಿ ಸರ್ಕಾರ ಮುಸ್ಲಿಂ ಮಹಿಳೆಯರ ಪರವಾಗಿದೆ; ಪ್ರಧಾನಿ ನರೇಂದ್ರ ಮೋದಿ
ಸಹರಾನ್ ಪುರ: ಬಿಜೆಪಿ ಸರ್ಕಾರ ಮುಸ್ಲಿಂ ಮಹಿಳೆಯ ಏಳ್ಗೆಗೆ ಶ್ರಮಿಸುತ್ತಿದೆ. ಆದ್ರೆ ಬೇರೆ ಪಕ್ಷದವರು ಮುಸ್ಲಿಂ ಸಹೋದರಿಯರಿಗೆ ಮೋಸ ಮಾಡುತ್ತಿದ್ದಾರೆ. ಭಾರತದಲ್ಲಿ ಮುಸ್ಲಿಂ ಮಹಿಳೆಯರ ಹಕ್ಕುಗಳು ಮತ್ತು ಅಭಿವೃದ್ಧಿಯನ್ನು ತಡೆಯಲು ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರ ಪ್ರದೇಶದ ಸಹರನ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವು ತ್ರಿವಳಿ ತಲಾಖ್ ಎಂಬ ಅನಿಷ್ಠ ಪದ್ದತಿಯಿಂದ ಮುಸ್ಲಿಂ ಮಹಿಳೆಯರನ್ನು ಮುಕ್ತಗೊಳಿಸಿದೆ. ಮುಸ್ಲಿಂ ಮಹಿಳೆಯರು ಬಹಿರಂಗವಾಗಿ ಮೋದಿ ಸರ್ಕಾರವನ್ನು ಬೆಂಬಲಿಸಲು ಆರಂಭಿಸಿದಾಗ, ವಿರೋಧಿಗಳು ಆತಂಕಗೊಂಡರು. ನಾವು ಪ್ರತಿ ಮುಸ್ಲಿಂ ಮಹಿಳೆಯೊಂದಿಗೆ ನಿಲ್ಲುತ್ತೇವೆ ಎಂದು ಒತ್ತಿ ಹೇಳಿದರು.