Bengaluru

ಫೆಬ್ರವರಿ 13ರಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಉದಯ

ಬೆಂಗಳೂರು: ಫೆಬ್ರವರಿ 13 ರಂದು ಜಮಖಂಡಿಯ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ  ಉದಯವಾಗಲಿದೆ. ಪಂಚಮಸಾಲಿಗಳ ಮೂಲ ಪೀಠದ ಪೀಠಾಧ್ಯಕ್ಷರಾದ ನಾವು ಹಾಗೂ ನಾಡಿನ ಶ್ರೇಷ್ಠ ಸಂತ-ಮಹಾಂತರ ದಿವ್ಯ ಸಾನಿಧ್ಯದಲ್ಲಿ ಐತಿಹಾಸಿಕ ಮೈಲುಗಲ್ಲು ಸ್ಥಾಪಿತವಾಗಲಿದೆ ಎಂದು ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ಇಂದು ಬೆಂಗಳೂರಿನ ಶ್ವಾಸ ಕೇಂದ್ರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.  ಸುಮಾರು ಒಂದುವರೆ ದಶಕಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಪ್ರಸಿದ್ದಿಯಾಗಿರುವ ಬಾಗಲಕೋಟೆಯ ಜಮಖಂಡಿಯಲ್ಲಿ ಇನ್ನೊಂದು ಪೀಠದ ಉದಯವಾಗುತ್ತಿದೆ. ಅನ್ನ, ಅಕ್ಷರ, ಆರೋಗ್ಯದಂತಹ ತ್ರಿವಿಧ ದಾಸೋಹದ ಕಲ್ಪನೆಯಿಂಧ ಕೃಷ್ಣೆಯ ತಟದಲ್ಲಿ ನೂರಾರು ಮಠಾಧೀಶರುಗಳ ನೇತೃತ್ವದಲ್ಲಿ, ವೀರಶೈವ ಲಿಂಗಾಯತ ಪಂಚಮಸಾಲಿ ಮಠಾಧೀಶರ ಒಕ್ಕೂಟ ಚಾರಿಟೇಬಲ್‌ ಟ್ರಸ್ಟ್‌ನ ಅಡಿಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಸ್ಥಾಪನೆಯಾಗಿದೆ. ಫೆಬ್ರವರಿ 13 ರಂದು ನೂತನ ಜಗದ್ಗುರು ಪೀಠಾರೋಹಣ ಧರ್ಮಸಭೆ ಕಾರ್ಯಕ್ರಮ ನಡೆಯಲಿದ್ದು ವಿರಾಟ್‌ ರೈತ ಸಮಾವೇಶವನ್ನೂ ಆಯೋಜಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

ವೀರಶೈವ ಲಿಂಗಾಯತ ಸಮುದಾಯದ ಪಂಚಮಸಾಲಿ ಹಾಗೂ ಎಲ್ಲಾ ಒಳಪಂಗಡಗಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ 2ಎ ಮೀಸಲಾತಿ ಹಾಗೂ ಕೇಂದ್ರದ ಓ.ಬಿ.ಸಿ ಮೀಸಲಾತಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುವುದು. ಸಮುದಾಯದ ಮೂಲ ಉದ್ಯೋಗವಾದ ಕೃಷಿಯಲ್ಲಿ ಆದಾಯ ಕೇಂದ್ರಿತ ಕೃಷಿ ವ್ಯವಸ್ಥೆಗೆ ರೈತರನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಶ್ರೀಪೀಠವು ಪ್ರಧಾನ್ಯತೆ ನೀಡಲಿದೆ ಎಂದು ಹೇಳಿದರು.

 

Share Post