ವಿಧಾನಸೌಧದ ಸುತ್ತಮುತ್ತ ಫೆ.14 ರಿಂದ 25ರವರೆಗೆ ನಿಷೇಧಾಜ್ಞೆ ಜಾರಿ
ಬೆಂಗಳೂರು: ಫೆಬ್ರವರಿ 14 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದೆ. ವಿಧಾನಸೌಧದ ಸುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲಪಂತ್ ಈ ಆದೇಶ ಹೊರಡಿಸಿದ್ದಾರೆ.