Bengaluru

ಧರ್ಮ, ಸಂಸ್ಕೃತಿ ಹೆಸರಲ್ಲಿ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವುದು ಸರಿಯಲ್ಲ-ಹೈಕೋರ್ಟ್

ಬೆಂಗಳೂರು: ಕಾಲೇಜುಗಳಲ್ಲಿ ಹಿಜಾಬ್‌, ಕೇಸರಿ ಶಾಲು ಸಂಘರ್ಷದ ಬಗ್ಗೆ ನಿನ್ನೆ ಹೈಕೋರ್ಟ್‌ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದು, ಕೋರ್ಟ್‌ ಮಧ್ಯಂತರ ಆದೇಶವನ್ನು ನೀಡಿದೆ. ಮಕ್ಕಳ ಭವಿಷ್ಯ ಹಾಳಾಗದಂತೆ ಅವರ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಬಾರದೆಂಬ ಕಾರಣಕ್ಕೆ ಮಧ್ಯಂತರ ಆದೇಶವನ್ನು ಹೊರಡಿಸಿದೆ. ನಮ್ಮದು ನಾಗರೀಕ ಸಮಾಜವಾಗಿದ್ದು, ಧರ್ಮ, ಸಂಸ್ಕೃತಿ ಹೆಸರಲ್ಲಿ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವುದು ಸರಿಯಲ್ಲ ಎಂದು ಹೇಳಿದೆ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ.

ಪ್ರತಿಭಟನೆಗಳಿಂದ ಶಾಲೆ-ಕಾಲೇಜುಗಳು ಬಂದ್‌ ಮಾಡಬಾರದು. ಅನಿರ್ದಿಷ್ಟಾವದಿ ಬಂದ್‌ ಮಾಡುವ ಶಿಕ್ಷಣ ಸಂಸ್ಥೆಗಳ ನಡವಳಿಕೆ ಸಂತಸ ನೀಡುವ ಸಂಗತಿಯಲ್ಲ. ಪ್ರಕರಣದ ವಿಚಾರಣೆ ತುರ್ತಿ ಆಧಾರದ ಮೇಲೆ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷ ತಡವಾದ್ರೆ ವಿದ್ಯಾರ್ಥಿಗಳ ಭಚಿಷ್ಯಕ್ಕೆ ನಷ್ಟವುಂಟಾಗುತ್ತದೆ. ಮುಂದಿನ ವಿದ್ಯಾಭ್ಯಾಸದ ಪ್ರವೇಶಕ್ಕೆ ಈಗಾಗಲೇ ಸಮಯ ಕೂಡ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಕಡ್ಡಾಯವಾಗಿರುತ್ತದೆ. ಹೀಗಾಗಿ ವಿಳಂಬ ಮಾಡುವುದರಿಂದ ಬಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದೆರೆಯಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷ ಇನ್ನೇನು ಕೊನೆಯಲ್ಲಿದೆ. ಸಂಬಂಧಪಟ್ಟವರೆಲ್ಲಾ ಶಾಂತಿ ಸಾಮರಸ್ಯ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

ಸರ್ಕಾರ ಹಾಗೂ ಸಂಬಂಧಿಸಿದವರಿಗೆ ಸೂಚನೆ ನೀಡ್ತಿದ್ದೇವೆ ಶಿಕ್ಷಣ ಸಂಸ್ಥೆಗಳನ್ನು ತೆರೆದು ಪಾಠ ಶುರು ಮಾಡಿ ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ ತಮ್ಮ ಧರ್ಮಾನುಸಾರ ಕೇಸರಿ ಶಾಲು, ಸ್ಕಾರ್ಫ್‌, ಹಿಜಾಬ್‌ ಅಥವಾ ಧಾರ್ಮಿಕ ಬಾವುಟವನ್ನಗಲೀ ತರಗತಿಯೊಳಗೆ ತರುವಂತಿಲ್ಲ ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ.

Share Post