BengaluruHealth

ಕೊರೊನಾ ವರದಿ: ಇಂದು 3,976ಕೊರೊನಾ ಸೋಂಕು ದೃಢ-41ಮಂದಿ ಸಾವು

ಬೆಂಗಳೂರು:  ರಾಜ್ಯದಲ್ಲಿ ಇಂದು 3,976 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 41 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ 44,571ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇಂದಿನ ಪಾಸಿಟಿವಿಟಿ ದರ ಶೇ 3.47 ರಷ್ಟಿದೆ,  ಸಾವನ್ನಪ್ಪಿದ ಸರಾಸರಿ ಶೇ 1.03. ಇಂದು 11,377 ಜನರು ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ 39,21,095 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ,  ಈವರೆಗೆ ಒಟ್ಟು 39,575 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 1,725 ಮಂದಿಗೆ  ಸೋಂಕು ತಗುಲಿದೆ, ನಗರದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ 71,525 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 18,000 ಜನರಲ್ಲಿ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Share Post