ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿಗಳು ನಮಾಜ್; ಶಿಕ್ಷಣ ಇಲಾಖೆಗೆ ಮೌಖಿಕ ದೂರು
ಮಂಗಳೂರು: ಹಿಜಾಬ್ ವಿವಾದ ಕೋರ್ಟ್ ಅಂಗಳದಲ್ಲಿದೆ. ಹೀಗಿರುವಾಗಲೇ ಸರ್ಕಾರಿ ಶಾಲೆಯೊಂದರಲ್ಲೇ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಮೊನ್ನೆಯಷ್ಟೇ ಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮ ತೀರ್ಪು ಬರುವವರೆಗೂ ಶಾಲಾ-ಕಾಲೇಜುಗಳಲ್ಲಿ ಧರ್ಮದ ಗುರುತುಗಳಿಗೆ ಅವಕಾಶ ನೀಡಬೇಡಿ ಎಂದು ಹೇಳಿತ್ತು. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮವೊಂದರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ದಕ್ಷಿಣ ಜಿಲ್ಲೆಯ ಕಡಬ ತಾಲ್ಲೂಕಿನ ಅಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ನಮಾಜ್ ಪ್ರಕರಣ ನಡೆದಿದೆ. ಇಲ್ಲಿ 6-7ನೇ ತರಗತಿಯ ಐದು ಮಂದಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದು, ಇದೀಗ ಆ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ಈ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಶಾಲಾ ಸಿಬ್ಬಂದಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಎಡಿಎಂಸಿ ಸದಸ್ಯರು ಶಿಕ್ಷಣ ಇಲಾಖೆಗೆ ಮೌಖಿಕ ದೂರು ನೀಡಿದ್ದಾರೆ.