Goa Elections : ರಾಜ್ಯವನ್ನು ಭ್ರಷ್ಟ ಮುಕ್ತ ಮಾಡುವ ಶಕ್ತಿ ನಿಮ್ಮಲ್ಲಿದೆ – ಕೇಜ್ರಿವಾಲ್
ನವದೆಹಲಿ : ಇಂದು ಗೋವಾ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಗೋವಾ ರಾಜ್ಯದ ಜನರಿಗೆ ಸಂದೇಶ ನೀಡಿದ್ದಾರೆ.
ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿಕೊಂಡಿರುವ ಕೇಜ್ರಿವಾಲ್, ಭ್ರಷ್ಟ ವ್ಯವಸ್ಥೆಯನ್ನು ಬದಲಿಸಿ, ಭ್ರಷ್ಟ ಮುಕ್ತ ಮಾಡುವ ಶಕ್ತಿ ನಿಮ್ಮಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಗೋವಾದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಚುನಾವಣೆ ನಡೆದಿದೆ. 40 ಕ್ಷೇತ್ರಗಳಿಂದ ಒಟ್ಟು 301 ಅಭ್ಯರ್ಥಿಗಳು ಸ್ಪರ್ಧೆ ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಕೂಡ ಸ್ಪರ್ಧೆ ನಡೆಸುತ್ತಿರುವುದರಿಂದ ಬಹುಕೋನ ಸ್ಪರ್ಧೆ ಏರ್ಪಟ್ಟಿದೆ.
Dear Goenkars
You have the power to change this corrupt system and make Goa corruption free.
Please step out and vote for the future of your children today.
— Arvind Kejriwal (@ArvindKejriwal) February 14, 2022