ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ; ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರು
ಧಾರವಾಡ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಡೋಜ ಚೆನ್ನವೀರ ಕಣವಿ ಇಹಲೋಕ ತ್ಯಜಿಸಿದ್ದಾರೆ. ಚೆನ್ನವೀರ ಕಣವಿ ಅವರು ಕಳೆದ ಒಂದು ತಿಂಗಳಿಂದ ಎಸ್‌ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ವೆಂಟಿಲೇಟರ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಖ್ಯಾತ ಕವಿ ಚೆನ್ನವೀರ ಕಣವಿ ಅವರು ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ ಬಳಲುತ್ತಿದ್ದರು. ಜೊತೆಗೆ ಕೊರೊನಾ ಕೂಡಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೇ ಕಾಳಜಿ ವಹಿಸಿ, ತಜ್ಞ ವೈದ್ಯರನ್ನು ನೇಮಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಾಡೋಜ ಕಣವಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.