ತೈವಾನ್ ಸಾಂಸ್ಕೃತಿಕ ರಾಯಭಾರಿ ಬಾಶುವಾನ್- ಸಿಎಂ ಬೊಮ್ಮಾಯಿ ಭೇಟಿ
ಬೆಂಗಳೂರು: ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಶುವಾನ್ ತಮ್ಮ ನೇತೃತ್ವದ ನಿಯೋಗದೊಂದಿಗೆ ಆಗಮಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಬಾಶುವಾನ್ ಹಾಗೂ ಸಿಎಂ ಬೊಮ್ಮಾಯಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.