Bengaluru

MEKEDATU PROTEST: ಫೆಬ್ರವರಿ 27 ರಿಂದ ಮತ್ತೆ ಕಾಂಗ್ರೆಸ್‌ ಪಾದಯಾತ್ರೆ

ಬೆಂಗಳೂರು; ಮೇಕೆದಾಟು ಯೋಜನೆಗೆ ಆಗ್ರಹಿಸಿ ಫೆಬ್ರವರಿ 27 ರಿಂದ ಮತ್ತೆ ಪಾದಯಾತ್ರೆ ನಡೆಸಲು ಕಾಂಗ್ರೆಸ್‌ ತೀರ್ಮಾನ ಮಾಡಿದೆ. ರಾಮನಗರದಿಂದ ಕಾಂಗ್ರೆಸ್‌ ಪಾದಯಾತ್ರೆ ಮುಂದುವರೆಸಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಫೆಬ್ರವರಿ 27 ರಿಂದ ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುತ್ತದೆ. ನಮ್ಮ ನೀರು ನಮ್ಮ ಹಕ್ಕು ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಸುತ್ತೇವೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ ಹೋರಾಟದ ಮುಂದವರಿದ ಭಾಗ ಇದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜನವರಿ 9 ರಿಂದ ಕಾಂಗ್ರೆಸ್‌ ಪಾದಯಾತ್ರೆ ಹಮ್ಮಿಕೊಂಡಿತ್ತು. ಆದ್ರೆ ಆ ಸಮಯದಲ್ಲಿ ಕೊರೊನಾ ನಿಯಮಗಳು ಜಾರಿಯಲ್ಲಿದ್ದವು. ಈ ಕಾರಣಕ್ಕಾಗಿ ರಾಮನಗರದಲ್ಲಿ ಪಾದಯಾತ್ರೆಯನ್ನು ಮೊಟಕುಗೊಳಿಸಲಾಗಿತ್ತು. ಇದೀಗ ಕೊರೊನಾ ಇಳಿಮುಖವಾಗಿದೆ. ಈ ಹಿನ್ನೆಯಲ್ಲಿ ರಾಮನಗರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲು ಕಾಂಗ್ರೆಸ್‌ ತೀರ್ಮಾನ ಮಾಡಿದೆ.

 

Share Post