Politics

ನಲಪಾಡ್‌ ವಿರುದ್ಧ ಎಫ್.ಐ.ಆರ್‌ ದಾಖಲು

ಬೆಂಗಳೂರು : ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಅನಧಿಕೃತ ಫ್ಲೆಕ್ಸ್‌ ಅಳವಡಿಸಿರುವ ಆರೋಪದಡಿ ನಲಪಾಡ್‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಿಸಲಾಗಿದೆ.

ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರುಗಳು ನಲಪಾಡ್‌ ವಿರುದ್ಧ ದಾಖಲಾಗಿದೆ. ಟೌನ್‌ಹಾಲ್‌ ಮುಂಭಾಗ ಅನಧೀಕೃತವಾಗಿ ಫ್ಲೆಕ್ಸ್‌ ಅಳವಡಿಕೆಯ ಬಗ್ಗೆ ಬಿಬಿಎಂಪಿ ಅಧಿಕಾರಿ ಹಾಗೂ ಸಾಮಾಜಿಕ ಹೋರಾಟಗಾರರಿಂದ ದೂರು ದಾಖಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್‌, ಬ್ಯಾನರ್‌ಗಳನ್ನು ಹಾಕದಂತೆ ಸರ್ಕಾರ ಆದೇಶ ನೀಡಿತ್ತು. ಇದನ್ನು ನಲಪಾಡ್‌ ಅವರು ಉಲ್ಲಂಘನೆ ಮಾಡಿದ ಕಾರಣ ಅವರ ಮೇಲೆ ಎಫ್‌ ಐ ಆರ್‌ ದಾಖಲಿಸಲಾಗಿದೆ. ಬಿ ಕೆ ಹರಿಪ್ರಸಾದ್‌ಗೆ ಅಭಿನಂದನಾ ಸಮಾರಂಭದ ಹಿನ್ನೆಲೆ ಈ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು.

ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್‌ ಬ್ಯಾನರ್‌ಗಳನ್ನು ತೆರವುಗೊಳಿಸಲು ಸರ್ಕಾರಕ್ಕೆ ಕೋರ್ಟ್‌ ಆದೇಶ ನೀಡಿದೆ. ಇನ್ನು ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಲು ಕೂಡ ಸೂಚಿಸಿದೆ.

Share Post