ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನಾಲ್ವರು ಆರೋಪಿಗಳು ಅರೆಸ್ಟ್
ಕೋಲಾರ: ಕೋಲಾರದಲ್ಲಿ ಕಾಮುಕರ ಗುಂಪೊಂದು ಪೈಶಾಚಿಕ ಕೃತ್ಯ ಎಸಗಿದೆ. ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಬಾಲಕಿಗೆ ಆಮಿಷ ತೋರಿಸಿ, ಊರ ಹೊರಗೆ ಕರೆದುಕೊಂಡು ಸಾಮೂಹಿಕ ಅತ್ಯಾಚಾರ ಎದಗಲಾಗಿದೆ.
ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ಎಸಗಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿಯ ಹೇಳಿಕೆ ಪಡೆದಿರುವ ಪೊಲೀಸರು, ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.