HARSHA MURDER CASE: ಮೂವರ ವಿಚಾರಣೆ ನಡೆಯುತ್ತಿದೆ; ಗೃಹಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಹಿಂದೆ ಐದು ಮಂದಿ ಇದ್ದಾರೆ ಎಂದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಸದ್ಯ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ವಿಚಾರಣೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ವಿಚಾರಣೆ ಹಂತದಲ್ಲಿರುವುದರಿಂದ ಯಾವುದೇ ಮಾಹಿತಿ ನೀಡಲಾಗುವುದಿಲ್ಲ. ಶೀಘ್ರದಲ್ಲೇ ಸತ್ಯಾತ್ಯತೆ ಹೊರಬೀಳಲಿದೆ ಎಂದು ಅವರು ಹೇಳಿದರು. ಇನ್ನು ನಾನು ಹರ್ಷ ಕುಟುಂಬಕ್ಕೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದೇನೆ. ಇನ್ನು ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದೇವೆ. ಶಿವಮೊಗ್ಗದಲ್ಲಿ 1200 ಪೊಲೀಸರಿದ್ದಾರೆ. ಬೆಂಗಳೂರಿನಿಂದ 200 ಪೊಲೀಸರನ್ನು ಕಳುಹಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಇದೊಂದು ವ್ಯವಸ್ಥಿತ ಸಂಚು ಅನ್ನೋ ಮಾಹಿತಿ ನಮಗೆ ಸಿಕ್ಕಿದೆ. ಈ ಕೊಲೆ ಯಾಕಾಯಿತು. ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ಶೀಘ್ರದಲ್ಲೇ ತಿಳಿಯಲಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.