Bengaluru

ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ʻಕೈʼ ನಾಯಕರಿಂದ ಪಾದಯಾತ್ರೆ- ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಕೆ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ರಾಜ್ಯಪಾಲರಲ್ಲಿ ಕಾಂಗ್ರೆಸ್‌ ನಾಯಕರು ಮನವಿ ಮಾಡಲಿದ್ದಾರೆ.

ನಾಳೆ ಪಾದಯಾತ್ರೆ ಮೂಲಕ ಸಂಜೆ 4ಗಂಟೆಗೆ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದ ನಿಯೋಗವು ಪಾದಯಾತ್ರೆ ಮೂಲಕ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಲಿದ್ದಾರೆ. ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್‌ ನಿಯೋಗ ರಾಜ್ಯಪಾಲರಲ್ಲಿ ಮನವಿ ಮಾಡಲಿದ್ದಾರೆ.

ಕಳೆದ ಐದು ದಿನಗಳಿಂದ ವಿಧಾನಸಭೆ ಹಾಗೂ ವಿಧಾನಪರಿಷತ್‌ ಕಲಾಪದಲ್ಲಿ ಸಚಿವರನ್ನು ವಜಾ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಕೂಡ ನಡೆಸುತ್ತಿದ್ದಾರೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ನಾಳೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.

Share Post