Hijab Row: ಹೈಕೋರ್ಟ್ನ ತ್ರಿಸದಸ್ಯ ಪೀಠದಲ್ಲಿ ಹಿಜಾಬ್ ಅರ್ಜಿ ವಿಚಾರಣೆ
ಬೆಂಗಳೂರು: ಹಿಜಾಬ್ ವಿವಾದ ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಮುಂದುವರೆದಿದೆ. ನ್ಯಾಯಾಲಯದ ತ್ರಿಸದಸ್ಯ ಪೀಠದಲ್ಲಿ ಇಂದು ಕೂಡ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸರ್ಕಾರದ ಪರ ವಕೀಲ ಎ.ಜಿ.ಪ್ರಭುಲಿಂಗ ನಾವದಗಿ ವಾದ ಮಂಡಿಸುತ್ತಿದ್ದಾರೆ. ಸರ್ಕಾರದ ಆದೇಶ ಬಗ್ಗೆ ಹಾಗೂ ವಿದ್ಯಾರ್ಥಿಗಳು, ಕಾಲೇಜು ಅಭಿವೃದ್ಧಿ ಸಮಿತಿ ನಿಯಮಗಳ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಹಿಜಾಬ್ ಅರ್ಜಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ತೀರ್ಪಿಗಾಗಿ ಸರ್ಕಾರ, ವಿದ್ಯಾರ್ಥಿಗಳು, ಪೋಷಕರು, ಶಾಲಾ-ಕಾಲೇಜು ಆಡಳಿತ ಮಂಡಳಿ ಎದುರು ನೋಡುತ್ತಿದೆ.