International

UKRAINE-RUSSIA WAR; ಸೈನಿಕರು, ನಾಗರಿಕರು ಸೇರಿ 137 ಮಂದಿ ಸಾವು; ಉಕ್ರೇನ್‌ ನಾಗರಿಕರು ತತ್ತರ

ಕೀವ್​: ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಸಾರಿದ್ದು, ವಿವಿಧ ನಗರಗಳಲ್ಲಿ ರಷ್ಯಾ ಮಿಲಿಟರಿ ಪಡೆ ದಾಳಿ ನಡೆಸುತ್ತಿದೆ. ನಿನ್ನೆಯ ದಾಳಿಯಲ್ಲಿ ಒಟ್ಟು 137 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ನಾಗರಿಕರು, ಸೈನಿಕರು ಸೇರಿದ್ದಾರೆ. ರಷ್ಯಾದ ಸೈನಿಕರು ಕೂಡಾ ಹತರಾಗಿದ್ದಾರೆ. ಈ ಬಗ್ಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರೇ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ವಿಡಿಯೋವೊಂದನ್ನು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ಬಿಡುಗಡೆ ಮಾಡಿದ್ದಾರೆ. ರಷ್ಯಾ ಸೇನೆ ಉಕ್ರೇನ್‌ ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಉಕ್ರೇನ್‌ನ ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಸೇನೆಯ ಮೇಲೆ ಅಟ್ಯಾಕ್‌ ಮಾಡುವುದು ಬಿಟ್ಟು ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ ಎಂದು ಉಕ್ರೇನ್‌ ಅಧ್ಯಕ್ಷರು ಹೇಳಿದ್ದಾರೆ.

Share Post