ಬಿಡದಿಯಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ; ಜಮೀನು ವಿವಾದ ಕಾರಣ..?
ರಾಮನಗರ: ಬಿಡದಿ ಬಳಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ ನಡೆದಿದೆ. ಇಲ್ಲಿಗೆ ಸಮೀಪದ ಬೈರವನದೊಡ್ಡಿ ಗ್ರಾಮದ ಬಳಿಯಲ್ಲಿ ತೋಟದ ಮನೆಯಲ್ಲಿ ಈ ಕೃತ್ಯ ಎಸಗಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅರವತ್ತು ವರ್ಷ ಗಂಟಪ್ಪ ಕೊಲೆಯಾದ ಕಾಂಗ್ರೆಸ್ ಮುಖಂಡ. ದುಷ್ಕರ್ಮಿಗಳು ಗಂಟಪ್ಪನ ಕುತ್ತಿಗೆಯನ್ನು ಚಾಕುವಿನಿಂದ ಇರಿದಿದ್ದಾರೆ. ಹೊಟ್ಟೆ ಭಾಗಕ್ಕೂ ತಿವಿದು ಕೊಲೆ ಮಾಡಲಾಗಿದೆ.
ಗಂಟಪ್ಪ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರು. ಜೊತೆಗೆ ತೋಟದ ಮನೆಯಲ್ಲಿ ಬೈಕ್ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದರು. ಕಳೆದ ರಾತ್ರಿ ಅವರು ಅಲ್ಲಿಯೇ ಮಲಗಿದ್ದರು. ಇದನ್ನು ಗಮನಿಸಿದ್ದ ದುಷ್ಕರ್ಮಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಜಮೀನು ವಿವಾದ ಸಂಬಂಧ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಯುತ್ತಿದೆ.